Current Affairs

ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಮಂತ್ರಿ ಅವರಿಂದ ಸಂತಾಪ ಸೂಚನೆ

ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಮಂತ್ರಿ ಅವರಿಂದ ಸಂತಾಪ ಸೂಚನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ಅಪಘಾತದಲ್ಲಿ ಆದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಅವರ ಕಛೇರಿಯ ಎಕ್ಸ್‌ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

“ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೆನೆ.

ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ: ಪಿ.ಎಂ. @narendramodi”

 

Visitor Counter : 23